ಡಾ.ಕೆ. ಎಂ. ರಾಘವ ನಂಬಿಯಾರ್ ಗೆ ಪಾರ್ತಿಸುಬ್ಬ ಪ್ರಶಸ್ತಿ

0
10

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ.

ಮೇ 3ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿರುವ 2025ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ನಂಬಿಯಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here