ರಕ್ತದಾನ ಮಾಡಿ ನಿಗದಿತ ಸಮಯಕ್ಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ

0
9

ಕಾಸರಗೋಡು : ಸಮಾಜಸೇವೆಯೇ ತಮ್ಮ ಬದುಕಿನ ಧ್ಯೇಯ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ಕಾಸರಗೋಡಿನ ಹಿರಿಯ ಸಮಾಜಸೇವಕ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ಸೇವಾ ಮನೋಭಾವಕ್ಕೆ ಮಾದರಿಯಾಗಿದ್ದಾರೆ.

ಒಡಿಯೂರಿನ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ “ಸೇವಾ ಸಂಭ್ರಮ–ಗ್ರಾಮೋತ್ಸವ 2026” ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 2ರಂದು ನಡೆದ ಬೃಹತ್ ವೈದ್ಯಕೀಯ ಶಿಬಿರದಲ್ಲಿ ಡಾ. ಹೊಳ್ಳ ಅವರು ಎರಡು ಯೂನಿಟ್ ರಕ್ತದಾನ ಮಾಡಿ ಸಾಮಾಜಿಕ ಕಳಕಳಿಯನ್ನು ಮೆರೆದರು.

ರಕ್ತದಾನದ ಬಳಿಕವೂ ವಿಶ್ರಾಂತಿ ಪಡೆಯದೆ, ತಮ್ಮ ದ್ವಿಚಕ್ರ ವಾಹನದಲ್ಲಿ ಕಾಸರಗೋಡಿಗೆ ಪ್ರಯಾಣಿಸಿ, ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ಅವರ ರೂವಾರಿಯಲ್ಲಿ ನಡೆಯುತ್ತಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ಗಡಿನಾಡು ಕರ್ನಾಟಕ ಕನ್ನಡ ಸಮ್ಮೇಳನ–2026 ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಆಗಮಿಸಿ ಭಾಗವಹಿಸಿದರು.

ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ಕನ್ನಡ ಭವನದ ನಿರ್ದೇಶಕರಾಗಿದ್ದು, ಗಡಿನಾಡು ಕರ್ನಾಟಕ ಕನ್ನಡ ಸಮ್ಮೇಳನ–2026 ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಮುಖಿ ಕಾರ್ಯಗಳಲ್ಲಿ ಸದಾ ಸಕ್ರಿಯರಾಗಿರುವ ಅವರು, ಸೇವೆ ಮತ್ತು ಕರ್ತವ್ಯ ಎರಡನ್ನೂ ಸಮಾನವಾಗಿ ನಿರ್ವಹಿಸುವ ಮೂಲಕ ಯುವಜನತೆಗೆ ಸ್ಪೂರ್ತಿಯಾಗಿದ್ದಾರೆ.

ಸಾರ್ವಜನಿಕರು ಹಾಗೂ ಕನ್ನಡಾಭಿಮಾನಿಗಳು ಡಾ. ಹೊಳ್ಳ ಅವರ ಸಾಮಾಜಿಕ ಬದ್ಧತೆ, ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿದ್ದು, “ಸಮಾಜಕ್ಕೆ ಮಾದರಿಯಾದ ವ್ಯಕ್ತಿತ್ವ” ಎಂದು ಪ್ರಶಂಸಿಸಿದ್ದಾರೆ. ಇಂತಹ ಸೇವಾ ಮನೋಭಾವವು ಯುವಪೀಳಿಗೆಗೆ ಸ್ಫೂರ್ತಿದಾಯಕವಾಗಿದ್ದು, ಸಮಾಜದಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಿದೆ.