ಡಾ. ಪಕ್ಕೀರಪ್ಪ ವಜ್ರಬಂಡಿ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026’

0
5

ಬೆಂಗಳೂರು : ತಳಕಲ್ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು, ಸಾಹಿತಿ ಹಾಗೂ ಕೃತಿಕರ್ತ ಡಾ. ಪಕ್ಕೀರಪ್ಪ ವಜ್ರಬಂಡಿ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ “ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ.

ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ಶಿಕ್ಷಣ, ಸಾಹಿತ್ಯ ಹಾಗೂ ಕನ್ನಡ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಡಾ. ಪಕ್ಕೀರಪ್ಪ ವಜ್ರಬಂಡಿ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.