ಪ್ರತಿಷ್ಠಿತ “ಆರ್ಯ ಭಟ “ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಮಾಜ ಸೇವಾ ನಿರತ, ಸಾಹಿತ್ಯ ಪೋಷಕ ವಿಜಯನಗರ ಜಿಲ್ಲೆಯ ಅರೋಗ್ಯ ನಿರೀಕ್ಷಣಾಧಿಕಾರಿ, ಡಾ. ಎಮ್. ಧರ್ಮನಗೌಡ ಇವರೀಗೆ, ” ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “2026 ಕ್ಕೆ ಆಯ್ಕೆಯಾಗಿದ್ದಾರೆ.
ಜೂಲೈ 26.ರಂದು ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ -ಗಡಿನಾಡು ಕನ್ನಡ ಸಮ್ಮೇಳನ, ಡಾ. ಸಿ. ಸೋಮಶೇಖರ್ ಐ. ಎ ಎಸ್., ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

