ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಬೆಂಗಳೂರು ಜಿಲ್ಲಾ ಅಧ್ಯಕ್ಷರಾಗಿ ಡಾ ಮಲಕಪ್ಪ ಅಲಿಯಾಸ್ ಮಹೇಶ್ ನೇಮಕ

0
6

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ. ಎನ್ ಅಶೋಕ, ಉಪಾಧ್ಯಕ್ಷ ಮಹಾದೇವ ಸಿ ಎಲ್ , ಪ್ರಧಾನ ಕಾರ್ಯದರ್ಶಿ ಸಿದ್ದೇಶ್ ಅವರ ಸಮ್ಮುಖದಲ್ಲಿ ಚನ್ನರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮಲಕಪ್ಪ ಅಲಿಯಾಸ್ ಮಹೇಶ್ ಬೆಂಗಳೂರು ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಡಾ ಮಲಕಪ್ಪ ಅಲಿಯಾಸ್ ಮಹೇಶ್ ಅವರು ಬೆಂಗಳೂರಿನ ಕಿಲಾರಿ ರಸ್ತೆ ಯ ಸಿ ಬಿ ಭಂಡಾರಿ ಜೈನ್ ಪ್ರೌಢಶಾಲೆ ಮತ್ತು ಪಿಯು ಕಾಲೇಜ್ ನಲ್ಲಿ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟಕರಾಗಿ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದು, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿದ್ದರು ಬೆಂಗಳೂರ ನಗರ ಪ್ರಧಾನ ಕಾರ್ಯದರ್ಶಿಯಾಗಿದ್ದು ಬೆಂಗಳೂರು ಜಿಲ್ಲಾ ಘಟಕದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು ಎರಡು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.

ಸಂಪರ್ಕ ವಿಳಾಸ : ಡಾ ಮಲಕಪ್ಪ ಅಲಿಯಾಸ್ ಮಹೇಶ್, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಬೆಂಗಳೂರು ಜಿಲ್ಲಾ ಘಟಕ, ಸಿ ಬಿ ಭಂಡಾರಿ ಜೈನ್ ಹೈ ಸ್ಕೂಲ್ ಮತ್ತು ಪಿಯು ಕಾಲೇಜ್, ಕಿಲಾರಿ ರಸ್ತೆ, ಬೆಂಗಳೂರು 5600 53
ಮೊಬೈಲ್ : 8147151863, 9110444324

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು, ಕರ್ನಾಟಕ ಆರೋಗ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ವೈದ್ಯ ಲೋಕ ಹೆಲ್ತ್ ವಿಷನ್ ಮಾಸ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಶ್ರೀಕೃಷ್ಣ ಮಾಯ್ಲೆಂಗಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.