ವರದಿ ರಾಯಿ ರಾಜ ಕುಮಾರ
ಮಂಗಳೂರು ರಾಗ ತರಂಗ ಸಂಸ್ಥೆಯ ಆಶ್ರಯದಲ್ಲಿ ಅಕ್ಟೋಬರ್ 5ರಂದು ಶಾರದಾ ವಿದ್ಯಾಲಯ ಮಂಗಳೂರಿನಲ್ಲಿ ಸಂಘದ ಅಧ್ಯಕ್ಷರಾದ ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ರಿತು ಪರ್ಣ ಹಾಗೂ ಸಂಘದ ಪದಾಧಿಕಾರಿಗಳಾದ ಸುಮನ ಘಾಂಟೆ ,ಪಿ.ಸಿ ರಾವ್, ಸೌಮ್ಯ ರಾವ್ ಶಶಿಧರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಿದರು.