ಜ.18 ರಂದು ಡಾ. ಮಾಲತಿ ಶೆಟ್ಟಿ ಮಾಣೂರಿಗೆ ‘ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’

0
14

ವರದಿ:- ಮಂದಾರ ರಾಜೇಶ್ ಭಟ್ ತುಳುನಾಡು ವಾರ್ತೆ

ತುಳುನಾಡು ವಾರ್ತೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಸನ ಮತ್ತು ನಾಟ್ಯಮಯೂರಿ ನೃತ್ಯ ಟ್ರಸ್ಟ್ ಕೊಡಗು ಇವುಗಳ ಜಂಟಿ ಆಶ್ರಯದಲ್ಲಿ ನೀಡಲಾಗುವ *’ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ ಗೆ ಸಾಹಿತಿ, ಪತ್ರಕರ್ತೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ.

​ಕಳೆದ 21 ವರ್ಷಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿರುವ ಇವರು, ‘ಅಮೃತ ಪ್ರಕಾಶ’ ಪತ್ರಿಕೆಯ ಮೂಲಕ 13 ವರ್ಷಗಳಿಂದ ಸಾಹಿತ್ಯ ಸೇವೆ ಮಾಡುತ್ತಿದ್ದಾರೆ. ಇವರು 9 ಕೃತಿಗಳನ್ನು ರಚಿಸಿದ್ದು, ತಮ್ಮ ಪತ್ರಿಕೆಯ ಮೂಲಕ ಇತರ ಲೇಖಕರ 49 ಕೃತಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಅಲ್ಲದೆ, ಶಾಲಾ-ಕಾಲೇಜುಗಳಲ್ಲಿ ‘ಉಚಿತ ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ನಡೆಸಿ ದಾಖಲೆ ನಿರ್ಮಿಸಿದ್ದಾರೆ.

ಜನವರಿ 18ರಂದು ಹಾಸನದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ವಿವೇಕಾನಂದ ಜಯಂತಿ ಉತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾಲತಿ ಶೆಟ್ಟಿ ಅವರು ಯಕ್ಷಗಾನ ಕಲಾವಿದ ದಿ. ಕಿಟ್ಟಣ್ಣ ಶೆಟ್ಟಿ ಮಾಣೂರು ಅವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here