
ಪುತ್ತೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿ, ನವದೆಹಲಿಯ ರಾಷ್ಟ್ರೀಯ ನಿರ್ವಹಣಾ ಸಮಿತಿ ಸದಸ್ಯರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಸೆ.30ರಂದು ಪುತ್ತೂರು ರೆಡ್ ಕ್ರಾಸ್ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸ್ಥಳೀಯ ಕಾರ್ಯಚಟುವಟಿಕೆಗಳು, ಸೇವಾ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪದಾಧಿಕಾರಿಗಳೊಂದಿಗೆ ವಿಚಾರ ವಿನಿಮಯ ನಡೆಸಿದರು. ಸಮಾಜ ಸೇವೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪಾತ್ರದ ಕುರಿತು ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಜನರು ರೆಡ್ ಕ್ರಾಸ್ ಸಂಸ್ಥೆಯೊಂದಿಗೆ ಕೈಜೋಡಿಸಿ, ಸೇವಾ ಕಾರ್ಯಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಭಾಪತಿ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ಆಸ್ಕರ್, ಉಪಸಭಾಪತಿ ಪದ್ಮನಾಭ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ಯಾಟ್ರಿಕ್ ಸಿಪ್ರಿಯನ್, ಅಶ್ವಿನ್ ಶೆಟ್ಟಿ ಸೇರಿದಂತೆ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
