ಕರ್ನಾಟಕದ ಹೆಸರಾಂತ ದಿನಪತ್ರಿಕೆಯಾದ ಪ್ರಜಾವಾಣಿ ಪ್ರತಿ ವರ್ಷವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರನ್ನು ಆಯ್ಕೆಮಾಡುತ್ತದೆ. ಅದರಂತೆ ಈ ಬಾರಿ 2025ನೆೇ ಸಾಲಿನ ಪ್ರಶಸ್ತಿಗೆ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಯ ಹತ್ತು ಮಂದಿ ಸಾಧಕಿಯರೊಂದಿಗೆ ಉಡುಪಿ ಜಿಲ್ಲೆ ಯಿಂದ ಬುಡಕಟ್ಟು ಸಮುದಾಯವಾದ ಕೊರಗ ಸಮುದಾಯದ ಶೈಕ್ಷಣಿಕ ಸಾಧಕಿ ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಗುಂಡ್ಮಿಯ ಡಾ. ಸಬಿತಾ ಕೊರಗ ಗುಂಡ್ಮಿ ಆಯ್ಕೆಯಾಗಿದ್ದರು.
ದಾವಣಗೆರೆಯಲ್ಲಿ ನಡೆದ ಸಮಾರಂಭದಲ್ಲಿ ಲೇಖಕಿ ಹಾಗೂ ಐ.ಪಿ.ಎಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಡಾ. ಸಬಿತಾ ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.