ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 23.03.2025ರಂದು ಉದ್ಘಾಟನೆ ಗೊಂಡಿತು.ಈ ಸಂದರ್ಭದಲ್ಲಿ ಕವಿಗೋಷ್ಠಿ,ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ, ಪದಗ್ರಹಣ ಸಮಾರಂಭ ನಡೆಯಿತು.
ಈ ಕಾರ್ಯಕ್ರಮ ದಲ್ಲಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಬೊಳುವಾರು ನಿವಾಸಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕಿ . ಡಾ.ಶಾಂತಾ ಪುತ್ತೂರುರವರಿಗೆ ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕರು ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾಸರಗೋಡು ಸ್ಥಾಪಕಾಧ್ಯಕ್ಷ ರಾದ ಡಾ.ವಾಮನ್ ರಾವ್ ಬೇಕಲ್ , ಕನ್ನಡ ಭವನದ ಸಂಚಾಲಕಿ ಸಂಧ್ಯಾ ರಾಣಿ ಟೀಚರ್, ಕನ್ನಡ ಭವನ ಕೊಡಗು ಘಟಕದ ಅಧ್ಯಕ್ಷ ರಾದ ಬಿ.ಬೊಳ್ಳಜಿರ ಅಯ್ಯಪ್ಪ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು ಘಟಕದ ಅಧ್ಯಕ್ಷೆ ರುಬೀನ ಎಂ.ಎ.ಕನ್ನಡ ಭವನ ಕೇಂದ್ರ ಸಮಿತಿ ಉಪಾಧ್ಯಕ್ಷ ರಾದ ರಾಜೇಶ್ ಚಂದ್ರಕೆ.ಪಿ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ರಾದ ವಿರಾಜ್ ಅಡೂರು, ಹಿರಿಯ ಸಾಹಿತಿ ನಾಗೇಶ್ ಕಾಲೂರು ಕೊಡಗು, ಬಿ.ಜಿ.ಅನಂತಶಯನ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲೆ, ಕೊಟ್ಟು ಕತ್ತಿರ ಕೆ ಯಶೋದ ಪ್ರಕಾಶ್ ಚಲನ ಚಿತ್ರ ನಟಿ ,ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಾ.ಶಾಂತಾಪುತ್ತೂರು ಅಜ್ಜಿಕುಟ್ಟಿರ ಭವ್ಯ ಬೋಪಣ್ಣ ರವರ ದೇವನೆಲೆರ ಭೀರ್ಯ ಕೃತಿ ಬಿಡುಗಡೆ ಮಾಡಿದರು.