ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಮಕೃಷ್ಣ ಶಿರೂರು ಅವರಿಗೆ ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಶಿವಮೊಗ್ಗದ ಕರ್ನಾಟಕ ಸಂಘದ ಸಭಾಭವನದಲ್ಲಿ ನಡೆದ ಕನ್ನಡ ನಾಡು ನುಡಿ ವೈಭವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ ಮೂರು ದಶಕಗಳಿಂದ ಕನ್ನಡ ಅಧ್ಯಾಪನ ಕಾರ್ಯದಲ್ಲಿ ತೊಡಗಿಕೊಂಡಿರುವ ಇವರು ಸಾಹಿತ್ಯ ಸೌರಭ ಮತ್ತು ಸಿರಿಪುರ ಸಂಸ್ಕೃತಿಕ ಪ್ರತಿಷ್ಠಾನದ ಮೂಲಕ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಅವರಿಂದ ಇನ್ನಷ್ಟು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಧು ನಾಯಕ್ ಹೂವಿನ ಹಡಗಲಿ ಅವರು ಶುಭ ಹಾರೈಸಿರುತ್ತಾರೆ.