ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಗುರುಕುಲ ತಿಲಕ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕವಿತ್ತ ಕರ್ಮಮಣಿ ಪ್ರತಿಷ್ಠಾನದ ಅಧ್ಯಕ್ಷರಾದ ಲಾಲ್ ಸಾಬ್ ಪೆಂಡಾರಿ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸ್ಮರಣೀಯಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅವರ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಕರ್ನಾಟಕ ರಾಜ್ಯ ಕವಿತೆ ಕರ್ಮ ಮಣಿ ಪ್ರತಿಷ್ಠಾನದ ಅಧ್ಯಕ್ಷರಾದ ಲಾಲ್ ಸಾಬ್ ಪೆಂಡಾರಿ ಅವರು
ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.

