ಡಾ. ಶಿರೂರು ಅವರು ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ : ರೇಖಾ ಭಟ್

0
4

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ಕರುನಾಡ ಕಲ್ಪವೃಕ್ಷ ಫೌಂಡೇಶನ್ (ರಿ) ಕರ್ನಾಟಕ ಇದರ ರಾಜ್ಯಾಧ್ಯಕ್ಷರಾದ ರೇಖಾ ಶಿವರಾಮ ಭಟ್ ಅವರು ತಿಳಿಸಿರುತ್ತಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಸರೋಜಿನಿ ಶಾನುಭೋಗ ಅವರ ಪುತ್ರರಾದ ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸ್ಮರಣೀಯಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಅವರ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಹಾರೈಸಿ ಕರುನಾಡ ಕಲ್ಪವೃಕ್ಷ ಪ್ರತಿಷ್ಠಾನದ ಸಂಸ್ಥಾಪಕರಾದ ಕನಕ ಪ್ರೀತೇಶ್, ರಾಜ್ಯಾಧ್ಯಕ್ಷರಾದ ರೇಖಾ ಶಿವರಾಡಾ.ವೇದಾವತಿಮ ಭಟ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ವೇದಾವತಿ ಬಿ. ರಾವ್ ಅವರು ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.