ಡಾ. ಶಿರೂರು ಅವರು ಎಸ್ ರಾಧಾಕೃಷ್ಣನ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ: ಪ್ರೊ.ಪ್ರವೀಣ್ ಕನ್ಯಾಳ

0
68

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ಕರ್ನಾಟಕ ರಾಜ್ಯ ಅಕ್ಷರ ದೀಪ ಫೌಂಡೇಶನ್ ಅಧ್ಯಕ್ಷರಾದ ಪ್ರೊ. ಪ್ರವೀಣ್ ಕನ್ಯಾಳ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಸರೋಜಿನಿ ಶಾನುಭೋಗ ಅವರ ಪುತ್ರ.

ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸ್ಮರಣೀಯಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರಾಷ್ಟ್ರಪ್ರಶಸ್ತಿ ನೀಡಿಗೌರವಿಸಲಾಗುತ್ತಿದೆ.

ಅವರ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಕರ್ನಾಟಕ ರಾಜ್ಯ ಅಕ್ಷರದೀಪ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಪ್ರೊ.ಪ್ರವೀಣ್ ಕನ್ಯಾಳ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀ ಗಣಪತಿ ಹೆಗಡೆ ದಾಂಡೇಲಿ ಅವರು ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.