ಡಾ. ಶಿರೂರು ಅವರು ವಿದ್ಯಾವಿಭೂಷಣ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ:ಲಾಲ್ ಸಾಬ್

0
13

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ವಿದ್ಯಾವಿಭೂಷಣ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ನಾಗರ ಮನ್ನೋಳಿಯ ಕವಿತ್ತ ಕರ್ಮಣಿ ಫೌಂಡೇಶನ್ ಅಧ್ಯಕ್ಷರಾದ ಲಾಲ್ ಸಾಬ್ ಪೆಂಡಾರಿ ಅವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಸರೋಜಿನಿ ಶಾನುಭೋಗ ಅವರ ಪುತ್ರ.

ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸ್ಮರಣೀಯಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ವಿದ್ಯಾವಿಭೂಷಣ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಅವರ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಕವಿತ್ತ ಕರ್ಮಣಿ ಫೌಂಡೇಶನ್ ಅಧ್ಯಕ್ಷರಾದ ಲಾಲ್ ಸಾಬ್ ಪೆಂಡಾರಿ ಅವರು ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.