ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವಸುಂದರಿ – 2024 ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ.
ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ವಿಜೇತರಾಗಿದ್ದಾರೆ.
2018ರಲ್ಲಿ ಈಕೆ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಶನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು. ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿದ್ದಾರೆ.
ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್ ಪೂರೈಸಿರುವ ಡಾ. ಶೃತಿ ಹೆಗಡೆ, ತುಮಕೂರಿನಲ್ಲಿ ಎಂಡಿ ಅಧ್ಯಯನ ನಡೆಸುತ್ತಿದ್ದಾರೆ. ಡಾ. ಶೃತಿ ಹೆಗಡೆ ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ದುಬೈ, ಮಾಲ್ಡೀವ್ಸ್, ಭೂತಾನ್ ಮುಂತಾದ ದೇಶಗಳಲ್ಲಿ ಅವರು ಪ್ರದರ್ಶನ ನೀಡಿದ್ದಾರೆ. ಕೆಲವು ಧಾರಾವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್‌ನಲ್ಲಿ ಅವರು ನಟಿಸಿದ್ದಾರೆ.