ಅದಮ್ಯ ಚೇತನ ಬಿ.ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಡಾ.ತಲ್ಲೂರು ಸಂತಾಪ

0
9

ಉಡುಪಿ : ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ನೇತಾರ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

1983ರಿಂದ 1994ರವರೆಗೆ ಶಾಸಕರಾಗಿ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಬಿ.ಅಪ್ಪಣ್ಣ ಹೆಗ್ಡೆ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಳದ ಮುಖ್ಯಸ್ಥರಾಗಿ, ಕೊಲ್ಲೂರು ದೇವಳದ ಅಧ್ಯಕ್ಷರಾಗಿಯೂ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ.

ಅಪ್ಪಣ್ಣ ಹೆಗ್ಡೆಯವರ ಜೀವನಾದರ್ಶಗಳು ಸಮಾಜಕ್ಕೆ ಮಾದರಿಯಾಗಿದೆ. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಡಾ.ತಲ್ಲೂರು ತಮ್ಮ ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here