ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್‌ಗೆ ಆರ್ಯ ಭಟ ರಾಜ್ಯ ಪ್ರಶಸ್ತಿ-2026

0
28

ಬೆಂಗಳೂರು : ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಸೇವೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರತಿಷ್ಠಿತ ‘ಆರ್ಯ ಭಟ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ನಾಡು-ನುಡಿ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇಬ್ಬರೂ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತ್ಯಾಸಕ್ತರು, ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದು, ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಿದ್ದಾರೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಆಯುರ್ಭಟ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here