ಜೀರ್ಣೋದ್ಧಾರ ಹಂತದಲ್ಲಿರುವ ಶ್ರೀಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಡಾ.ಡಿ ವಿರೇಂದ್ರ ಹೆಗ್ಗಡೆ ಶನಿವಾರ ಭೇಟಿ ನೀಡಿ ದೇವಾಲಯದ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ದೇವಳದ ಆನುವಂಶಿಕ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ., ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಉಪಾಧ್ಯಕ್ಷರಾದ ಶಿವ ಪ್ರಸಾದ್ ಆಚಾರ್ಯ, ಧನಕೀರ್ತಿ ಬಲಿಪ, ಜಂಟಿ ಕಾರ್ಯದರ್ಶಿಗಳಾದ ಕೆ.ಶ್ರೀಪತಿ ಭಟ್, ವಿದ್ಯಾ ರಮೇಶ್ ಭಟ್, ವಾದಿರಾಜ ಮಡ್ಮನ್ನಾಯ, ಪ್ರಧಾನ ಅರ್ಚಕ ಅಡಿಗಳ್ ಅನಂತಕೃಷ್ಣ, ನಾಗವರ್ಮ ಜೈನ್ ಮತ್ತಿತರರಿದ್ದರು.