ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು – 2024” ನವಂಬರ್ 15, 16 ನೇ ಶುಕ್ರವಾರ ಮತ್ತು ಶನಿವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನವಂಬರ್ 15 ರಂದು ಬೆಳಗ್ಗೆ 9 ರಿಂದ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಹಿರಿಯ ವಿಜ್ಞಾನಿ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ಇವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ.ಎಮ್. ಕೃಷ್ಣ ಭಟ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿರ್ದೇಶಕರಾದ ಡಾ.ಕೃಷ್ಣಪ್ರಸನ್ನ ಕೆ ಇವರು ಉಪಸ್ಥಿತಿ ಇರಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಲವು ರೀತಿಯ ಸ್ಪರ್ಧೆಗಳು ನಡೆಯಲಿದ್ದು, ಮೊದಲನೆಯ ದಿನ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ದೃಶ್ಯಕಾವ್ಯ, ಯುವ ವಾಣಿಜ್ಯೋದ್ಯಮಿ, ಗಾಳಿಪಟ ಹಾರಾಟ, ಮುಖವರ್ಣಿಕೆ, ವೀಡಿಯೋ ಸಂಕಲನ ಮುಂತಾದ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ ಗಂಟೆ 1.15 ರಿಂದ ವಿನಯ್. ವಿ ಜಾದವ್, ಉಪಾಧ್ಯಕ್ಷರು, ಬಿ ಎಸ್ ಬಿ ಎಸ್ ಬೆಂಗಳೂರು ಇವರಿಂದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ನಿರ್ದೇಶಕರಾದ ಡಾ. ಮುರಳೀಕೃಷ್ಣ ರೈ ಇವರು ಉಪಸ್ಥಿತಲಿರಲಿದ್ದಾರೆ. ನವಂಬರ 16 ರ ಕನಸುಗಳು ಕಾರ್ಯಕ್ರಮದಲ್ಲಿ ಚರ್ಚಾಸ್ಪರ್ಧೆ, ಯಕ್ಷಗಾನ ಭಾಗವತಿಕೆ, ಕಲರವ ಸಾಂಸ್ಕೃತಿಕ ವೈವಿಧ್ಯ, ನಿಧಿಶೋಧ, ಭಗವದ್ಗೀತಾ ಕಂಠಪಾಠ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ 12.15 ಕ್ಕೆ ಕನಸುಗಳು ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ಕೋಶಾಧಿಕಾರಿಗಳಾದ ಸಚಿನ್ ಶೆಣೈ. ಕೆ ಇವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಶ್ವಾಸ್ ಶೆಣೈ, ಅಧ್ಯಕ್ಷರು ಆಡಳಿತಮಂಡಳಿ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಲೇಬಲ್ ಫ್ಯೂಸ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ, ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಚಂದನ್ ಶ್ರೀಧರ್ ಇವರು ಭಾಗವಹಿಸಲಿದ್ದಾರೆ. ರಮೇಶ್ ಪ್ರಭು , ಅಧ್ಯಕ್ಷರು ಆಡಳಿತಮಂಡಳಿ, ವಿವೇಕಾನಂದ ವಸತಿ ನಿಲಯಗಳು, ಪುತ್ತೂರು ಹಾಗೂ ವೀಣಾ ಕಿರಣ , ಜೊತೆಕಾರ್ಯದರ್ಶಿ ಶಿಕ್ಷಕ-ರಕ್ಷಕ ಸಂಘ ವಿವೇಕಾನಂದ ಪದವಿಪೂರ್ವಕಾಲೇಜು, ಇವರು ಸಮಾರೋಪ ಕಾರ್ಯಕ್ರಮದಲ್ಲಿ ಉಪಸ್ಥಿತಲಿರಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧೆಗಳಲ್ಲಿ ರಾಜ್ಯಾದ್ಯಂತ ಸುಮಾರು 50 ಕ್ಕೂ ಹೆಚ್ಚಿನ ಶಾಲೆಗಳಿಂದ 1000 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.
“ಕನಸುಗಳು-2024” ಕಾರ್ಯಕ್ರಮ: ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಸ್ಪರ್ಧೆಗಳು: 2 ದಿನಗಳಲ್ಲಿ 17 ವಿವಿಧ ರೀತಿಯ ಸ್ಪರ್ಧೆಗಳು
RELATED ARTICLES