ಸುಳ್ಯ: ಇಲ್ಲಿನ ಅರಂತೋಡು ತೋಡಿಕಾನ ಬಳಿ ಖಾಸಗಿ ಬಸ್ಸಿನ ಚಾಲಕರೊಬ್ಬರಿಗೆ ಬಸ್ಸು ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಇಂದು ಮುಂಜಾನೆ ಕರ್ತವ್ಯ ನಿರತರಾಗಿದ್ದ ವೇಳೆ ಗುರುಪ್ರಸಾದ್ ಕುಂಚಡ್ಕ (30) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಟೊದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವಾಗ ಅರಂಬೂರು ಬಳಿ ಆಟೊ ರಿಕ್ಷಾದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.