ಕಾರ್ಕಳ: ಬಸ್ ಚಾಲಕನಿಗೆ ಆಕಸ್ಮಿಕವಾಗಿ ಲೋ ಬಿಪಿ ಉಂಟಾದ ಕಾರಣ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿರುವ ಘಟನೆ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಕಾರ್ಕಳದಲ್ಲಿ ಗುರುವಾರ ನಡೆದಿದೆ.
ರಿಕ್ಷಾ ಚಾಲಕ ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಒಳಗಡೆ ಕುಳಿತಿದ್ದಾಗ, ಬಸ್ ಏಕಾಏಕಿ ಬಂದು ರಿಕ್ಷಾಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ರಿಕ್ಷಾ ಚಾಲಕರಿಗೆ ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಜೊತೆಗೆ, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಬಸ್ ಚಾಲಕ ಮತ್ತು ರಿಕ್ಷಾ ಚಾಲಕ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

