ಮುದ್ರಾಡಿಯಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಾಗಾರ

0
25

ಹೆಬ್ರಿ : ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ.ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಸೈಬರ್ ಕ್ರೈಂ ಬಗ್ಗೆ ಎಚ್ಚರಿಕೆಯಿಂದಿರಿ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ. ನಿಮ್ಮ ಭವಿಷ್ಯಕ್ಕೆ ಮಾರಕವಾಗುವ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಜ್ಞಾನ ಸಂಪಾದನೆಗೆ ನಿಮ್ಮ ಸಮಯವನ್ನು ಮೀಸಲಿಟ್ಟು ಉನ್ನತ ಸ್ಥಾನಮಾನವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಹೆಬ್ರಿ ಆರಕ್ಷಕ ಠಾಣೆಯ ಉಪ ಠಾಣಾಧಿಕಾರಿ ಚಂದ್ರ ಎ. ಕೆ. ಹೇಳಿದರು.

ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಮಾದಕ ವಸ್ತುಗಳ ಸೇವನೆಯ ವಿರುದ್ಧ ನಡೆದ ಜಾಗೃತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ವಿದ್ಯಾರ್ಥಿ ನಾಯಕ ಪ್ರತೀಕ್ ಅನಿಸಿಕೆ ವ್ಯಕ್ತಪಡಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.ಶಿಕ್ಷಕ ಪಿ. ವಿ. ಆನಂದ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ಮಹೇಶ್ ನಾಯ್ಕ್ ವಂದಿಸಿದರು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here