ಕಾಲೇಜು–ಹಾಸ್ಟೆಲ್ ಗಳಲ್ಲಿ ಡ್ರಗ್ಸ್ ತಪಾಸಣೆ : ಸಿಕ್ಕಿಬಿದ್ದ ವಿದ್ಯಾರ್ಥಿಗಳು

0
90

ಬೆಂಗಳೂರು ಮಾದಕ ವಸ್ತು ಸೇವನೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 8 ಖಾಸಗಿ ಪದವಿ ಕಾಲೇಜುಗಳ ಸುಮಾರು ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಿದ್ದಾರೆ.

ವಿಜಯನಗರ ಉಪ ವಿಭಾಗ ವ್ಯಾಪ್ತಿಯ ಎಂಟು ಕಾಲೇಜು ಮತ್ತು ಎರಡು ಹಾಸ್ಟೆಲ್ ಗಳಲ್ಲಿ ಡ್ರಗ್ಸ್ ಸೇವನೆ ಬಗ್ಗೆ ತಪಾಸಣೆ ನಡೆಸಲಾತ್ತು ಈ ವೇಳೆ ಕೆಲವು ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದ್ದು ಆ ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತಕ್ಕೆ ಸನ್ಮಿತ್ರ ಕಾರ್ಯಕ್ರಮದಡಿ ಪೋಷಕರಿಗೆ ಪೊಲೀಸರು ನೆರವು ನೀಡಲಿದ್ದಾರೆ.

ಇತ್ತೀಚೆಗೆ ಡ್ರಗ್ಸ್ ಪ್ರಕರಣಗಳಲ್ಲಿ ಬಂಧಿತ ಪೆಡ್ಲರ್ ಗಳ ವಿಚಾರಣೆಯ ವೇಳೆ ಡ್ರಗ್ಸ್ ಮಾಫಿಯಾದ ಪ್ರಮುಖ ಗ್ರಾಹಕರೇ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ಆತಂಕದ ಸಂಗತಿ ಬಯಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕಾಲೇಜು, ಹಾಸ್ಟೆಲ್ ಗಳಲ್ಲಿ ಹರಡಿರುವ ಡ್ರಗ್ಸ್ ಮಾರಾಟ ಜಾಲಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಿದ್ದಾರೆ.

ಕೆಲವು ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅವರನ್ನು ವ್ಯಸನಮುಕ್ತರಾಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಮೇಲೆ ಪೊಲೀಸರು ನಿರಂತರವಾಗಿ ನಿಗಾ ವಹಿಸಿದ್ದಾರೆ.

ವಿದ್ಯಾರ್ಥಿಗಳನ್ನು ಮಾದಕ ವಸ್ತು ಸೇವನೆಯಿಂದ ಮುಕ್ತಗೊಳಿಸಲು ಸನ್ಮಿತ್ರ ಹೆಸರಿನ ಯೋಜನೆಯನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಜಾರಿಗೊಳಿಸಿದ್ದಾರೆ. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಪೊಲೀಸರು ನೆರವು ಸಿಗಲಿದೆ. ಅಂತಹ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್ ಗೆ ಒಳಪಡಿಸಿ ಪೋಷಕರ ಜೊತೆ ಸಮಾಲೋಚನೆ ನಡೆಸಿ ಡ್ರಗ್ಸ್ ಸೇವನೆಯಿಂದ ದೂರವಾಗಿಸಲು ಪ್ರಯತ್ನಿಸಲಾಗುತ್ತಿದೆ.

LEAVE A REPLY

Please enter your comment!
Please enter your name here