ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಿದ್ಧಾರ್ಥ (22) ಎಂದು ಗುರುತಿಸಲಾಗಿದೆ. ಸುಮಾರು 20 ಸಾವಿರ ರೂ. ಮೌಲ್ಯದ ಡ್ರಗ್ಸ್ ಹಾಗೂ ಮೊಬೈಲ್ ಫೋನ್ ಹ್ಯಾಂಡ್ ಸೆಟ್, 45,000 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಉಡುಪಿ ತಾಲೂಕಿನ ಹೆರ್ಗದ ಅಪಾರ್ಟ್‌ಮೆಂಟ್‌ನಲ್ಲಿ ಆರೋಪಿಯು ಮಾದಕ ವಸ್ತು ಮಾರಾಟದ ಚಟುವಟಿಕೆಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಮಣಿಪಾಲದ ವಿದ್ಯಾರ್ಥಿಗಳಿಗೆ ಮಾದಕವಸ್ತು ಸಾಗಾಟದ ಉದ್ದೇಶ ಬಂಧಿತ ವ್ಯಕ್ತಿಗಿತ್ತು ಎಂದು ಹೇಳಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.