ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ಅವರ ವಿಚ್ಛೇದನ ತೀರ್ಪು ಇಂದು ಹೊರಬರಲಿದೆ

0
272

ಕನ್ನಡ ಚಿತ್ರರಂಗದ ಒಂಟಿ ಸಲಗ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ಅವರ ವಿಚ್ಛೇದನ ತೀರ್ಪು ಇಂದು ಹೊರಬರಲಿದೆ. 2018ರಲ್ಲಿ ದುನಿಯಾ ವಿಜಯ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಸುಮಾರು ಆರು ವರ್ಷಗಳ ವಿಚಾರಣೆ ಬಳಿಕ, ಇಂದು ಮಧ್ಯಾಹ್ನ ಅಂತಿಮ ತೀರ್ಪು ಹೊರಬರುವ ನಿರೀಕ್ಷೆಯಿದೆ.

ಸ್ಯಾಂಡಲ್‌ವುಡ್‌ನಿಂದ ಒಂದಾದ ಮೇಲೊಂದು ಶಾಕಿಂಗ್ ನ್ಯೂಸ್ ಹೊರ ಬರುತ್ತಿದೆ. 2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್ ಹಾಜರಾಗಿದ್ದರು. ವಿಚಾರಣೆ ಸಂದರ್ಭದಲ್ಲಿ ‘ನಾಗರತ್ನ ಜೊತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಈ ಹೇಳಿಕೆ ದೊಡ್ಡಮಟ್ಟದಲ್ಲಿ ಸುದ್ದಿ ಆಗಿತ್ತು. ಕೌರ್ಯ ಮತ್ತು 2 ವರ್ಷಕ್ಕಿಂತ ಹೆಚ್ಚು ಸಮಯ ಬೇರೆ ವಾಸವಿದ್ದಾರೆ ನಾಗರತ್ನ ಎಂದು ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ ‘ನಾಗರತ್ನ ಜೊತೆ ಬಾಳೋಲೆ ಸಾಧ್ಯವಿಲ್ಲ ಮಕ್ಕಳ ಜವಾಬ್ದಾರಿಯನ್ನು  ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ’ ಎಂದು ವಿಜಯ್ ಹೇಳಿದಾಗ ಅದಕ್ಕೆ ‘ಜೀವನಾಂಶ ನೀಡಿರುವ ದಾಖಲೆ ಕೊಡಿ ಎಂದು ಕೇಳಿದ್ದೇವೆ’ ಎಂದು ನಾಗರತ್ನ ಹೇಳಿದ್ದರು. ಅಲ್ಲದೆ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ನಾಗರತ್ನ ಹೇಳುತ್ತಿದ್ದರಂತೆ. ಸದ್ಯ ಮಕ್ಕಳನ್ನು ಚಿತ್ರರಂಗಕ್ಕೆ ತರುವ ಪ್ರಯತ್ನದಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. 

ದುನಿಯಾ ವಿಜಯ್ ಹಿರಿಯ ಪುತ್ರಿ ರಿತನ್ಯಾ ವಿಜಯ್ ಮೊದಲ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಎರಡನೇ ಪುತ್ರಿ ಮೋನಿಕಾ ವಿದೇಶದಲ್ಲಿ ಸಿನಿಮಾಗಳ ಬಗ್ಗೆ ವ್ಯಾಸಂಗ ಮಾಡುತ್ತಿದ್ದಾರೆ ಹಾಗೂ ಪುತ್ರ ಸಾಮ್ರಾಟ್‌ ವಿದ್ಯಾಭ್ಯಾಸ ಮುಂದುವರೆಸುತ್ತಿದ್ದು ಶೀಘ್ರದಲ್ಲಿ ಬಣ್ಣದ ಪ್ರಪಂಚಕ್ಕೆ ಕಾಲಿಡುವ ಲಕ್ಷಣಗಳಿದೆ. 

LEAVE A REPLY

Please enter your comment!
Please enter your name here