ಚೆನ್ನೈ: ಬಿಜೆಪಿಯ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಪಕ್ಷ ತೊರೆದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಸೇರಿದಂತೆ ಮುಖಂಡರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
“ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಮ್ಮ ನಾಯಕ ಮತ್ತು ಮಾಜಿ ಬಿಜೆಪಿ ರಾಜ್ಯ ಐಟಿ ವಿಂಗ್ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಅವರನ್ನು ನಾವು ಅನುಸರಿಸಲು ನಿರ್ಧರಿಸಿದ್ದೇವೆ” ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಬರಸು ಅವರು ಹೇಳಿದ್ದಾರೆ.
ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಮತ್ತು ಪಳನಿಸ್ವಾಮಿ.