ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ ಲಾಲ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ 20 ಕೋಟಿ ರೂ. ನಗದು ಪತ್ತೆಯಾಗಿದೆ. ರಾಂಚಿಯ ಹಲವು ಸ್ಥಳಗಳಲ್ಲಿ ಇಂದು ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿದ್ದ ವೀರೇಂದ್ರ ರಾಮ್ ಅವರನ್ನು 100 ಕೋಟಿ ಮೌಲ್ಯದ ಆಸ್ತಿ ಗಳಿಸಿದ ಆರೋಪದ ಮೇಲೆ ಕಳೆದ ವರ್ಷ ಬಂಧಿಸಲಾಗಿತ್ತು. ವೀರೇಂದ್ರ ಅವರ ಬಳಿ ಜಾರ್ಖಂಡ್ ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ಒಂದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಈ ಪ್ರಕರಣದ ಸಂಬಂಧ ಸಂಜೀವ ಲಾಲ್ ಅವರ ಮನೆ ಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.