ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಮಾಜಿ ಸಚಿವ ನಾಗೇಂದ್ರ ನಿವಾಸಕ್ಕೆ ದಾಳಿ ನಡೆಸಿದ್ದು, ತನಿಖೆಯ ಬಳಿಕ ಮಾಜಿ ಸಚಿವರ ಆಪ್ತನನ್ನು ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್ ಎಂಬವರನ್ನು ಅಧಿಕಾರಿಗಳು ವಶಕ್ಕೆ ಪಡೆದು ಶಾಂಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ಇದೆ ಎಂಬುದು ಇಡಿ ತನಿಖೆಯಿಂದ ದೃಢಪಟ್ಟಿದೆ ಎನ್ನಲಾಗಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ನಾಗೇಂದ್ರ ನಿವಾಸಕ್ಕೆ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ನಾಗೇಂದ್ರ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಅವರು ಪರಿಶೀಲಿಸಿದ್ದಾರೆ.