ಉಡುಪಿಯ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಹದಿನೇಳನೆಯ ಸಾಹಿತ್ಯ ಸಮ್ಮೇಳನದಲ್ಲಿ ಕೊರಗ ಸಮುದಾಯದ ಶೈಕ್ಷಣಿಕ ಸಾಧಕಿ ಡಾ. ಸಬಿತಾ ಕೊರಗ ಗುಂಡ್ಮಿಯವರನ್ನು ಸನ್ಮಾನಿಸಲಾಯಿತು.
ಡಾ. ಸಬಿತಾ ಗುಂಡ್ಮಿಯವರು ಪ್ರಸುತ್ತ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯಿಲಿ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ಡಾ. ಪಾದೇಕಲ್ಲು ವಿಷ್ಣು ಭಟ್ಟ, ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಡಾ. ಲಕ್ಷೀನಾರಾಯಣ ಕಾರಂತ, ನರೇಂದ್ರ ಕುಮಾರ್ ಕೋಟ ಮತ್ತು ಇತರರು ಇದ್ದರು.