ತೀವ್ರ ತಲೆನೋವಿಗೆ ಬೇಸತ್ತು ವೃದ್ಧ ಆತ್ಮಹತ್ಯೆ..!

0
35

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ತೀವ್ರ ತಲೆನೋವು ಮತ್ತು ದೈಹಿಕ ಅಸ್ವಸ್ಥತೆಯಿಂದ ಮನನೊಂದಿದ್ದ 85 ವರ್ಷದ ಹಿರಿಯ ನಾಗರಿಕರೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಮನೆಯಲ್ಲೇ ಆಕಸ್ಮಿಕವಾಗಿ ಬಿದ್ದಿದ್ದ ಅವರು, ಅಂದಿನಿಂದ ನಿರಂತರ ತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರೂ ನೋವು ಕಡಿಮೆಯಾಗದ ಕಾರಣ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಘಟನೆಯ ದಿನ ರಾತ್ರಿ ಕುಟುಂಬ ಸದಸ್ಯರೊಂದಿಗೆ ಎಂದಿನಂತೆ ಮಾತನಾಡಿ, ತಾಂಬೂಲ ಸೇವಿಸಿದ ಬಳಿಕ ತಮ್ಮ ಕೋಣೆಗೆ ಮಲಗಲು ತೆರಳಿದ್ದರು. ಆದರೆ ಮಧ್ಯರಾತ್ರಿ ವೇಳೆ ಕೋಣೆಯೊಳಗಿಂದ ಭಾರಿ ಶಬ್ದ ಕೇಳಿಬಂದಿದ್ದು, ಆತಂಕಗೊಂಡ ಕುಟುಂಬ ಸದಸ್ಯರು ಒಳಗೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಗುಂಡು ಹಾರಿಸಿಕೊಂಡ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುಂಡಿನ ಏಟಿನಿಂದ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಇತರ ಅಂಶಗಳ ಕುರಿತು ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here