ಒಂಟಿಕಟ್ಟೆಯಲ್ಲಿ ಬಾವಿಗೆ ಬಿದ್ದು ವೃದ್ಧೆ ಮೃತ್ಯು..!

0
36

ಮೂಡುಬಿದಿರೆ : ಬಾವಿಗೆ ಬಿದ್ದು 99 ವರ್ಷದ ಅಜ್ಜಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಮೂಡುಬಿದಿರೆ ಸಮೀಪದ ಒಂಟಿಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಕಮಲಾ (99) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕಮಲಾ ಅವರು ವಯೋಸಹಜ ಸಮಸ್ಯೆಗಳಿದ್ದರೂ ಆರೋಗ್ಯವಾಗಿದ್ದರು. ಅವರಿಗೆ ಪ್ರತಿದಿನ ಮನೆಯ ಸಮೀಪದ ಬಾವಿಗೆ ಹೋಗಿ ಒಳಗೆ ಇಣುಕುವ ಅಭ್ಯಾಸವಿತ್ತು ಎನ್ನಲಾಗಿದೆ. ಇದೇ ವೇಳೆ ಕಾಲು ಜಾರಿ ಬಾವಿಗೆ ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here