ಕಿನ್ನಿಗೋಳಿ: ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕಿನ್ನಿಗೋಳಿ ಸಮೀಪದ ಹಳೆಯಂಗಡಿಯ ಲೈಟ್‌ಹೌಸ್ ನಿವಾಸಿ ಅವಿನಾಶ್ ಮೃತ ದುರ್ದೈವಿ.
ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ, ಕಬ್ಬಿಣದ ಪೈಪ್ ಮೇಲಕ್ಕೆತ್ತುವಾಗ ವಿದ್ಯುತ್ ತಂತಿ ಕಬ್ಬಿಣದ ಪೈಪ್‌ಗೆ ತಾಗಿತು ಎನ್ನಲಾಗಿದೆ. ಈ ವೇಳೆ ವಿದ್ಯುತ್ ಪ್ರವಹಿಸಿ ಅವಿನಾಶ್ ಕುಸಿದುಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆಯೊಯ್ಯಲಾಯಿತಾದರೂ, ಅವರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.