ಕಾರ್ಕಳ: ಕರ್ನಾಟಕ ಗಮಕ ಕಲಾ ಪರಿಷತ್ತು (ರಿ) ಬೆಂಗಳೂರು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕ ಇವರ ಸಹಭಾಗಿತ್ವದಲ್ಲಿ ಜ 25 ರಂದು ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆಯಲಿರುವ ಕಾರ್ಕಳ ತಾಲೂಕು ಗಮಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ವ್ಯಾಖ್ಯಾನಕಾರ ಸಂಸ್ಕೃತಿ ಚಿಂತಕ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ವಿಜೇತ ಮುನಿರಾಜ ರೆಂಜಾಳ ರವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಸತೀಶ್ ಕುಮಾರ್ ಕೆಮ್ಮಣ್ಣು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.