ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0
13

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತಮಂಡಳಿ ಸಮ್ಮುಖದಲ್ಲಿ ನಡೆಯಿತು. ಪ್ರಸ್ತುತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಸುಬೋಧ್ ಶೆಟ್ಟಿ ಎಂ. ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಪುತ್ತೂರಿನ ಶಶಿಕಲಾ ಎಂ. ಕೆ ಹಾಗೂ ನೆಲ್ಯಾಡಿಯ ಸತ್ಯನಾರಾಯಣ ಆಯ್ಕೆಯಾದರು. ಜೊತೆ ಕಾರ್ಯದರ್ಶಿಯಾಗಿ ಪುತ್ತೂರಿನ ಉದಯರವಿ ಕೆ. ಹಾಗೂ ದಿವ್ಯಾ ಡಿ. ರಾವ್ ಇವರು ನೇಮಕಗೊಂಡರು. ಪದನಿಮಿತ್ತ ಕಾರ್ಯದರ್ಶಿಗಳಾಗಿ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಆಯ್ಕೆಯಾದರು.

ಈ ಸಭೆಯಲ್ಲಿ ಹಿಂದಿನ ವರ್ಷದ ಆಯವ್ಯಯ ಹಾಗೂ 2026-27 ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾಲೇಜು ಆಡಳಿತಮಂಡಳಿ ನಿರ್ದೇಶಕರಾದ ಡಾ. ಮುರಳಿಕೃಷ್ಣ ರೈ ಕೆ. ಇವರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ನಿರೂಪಿಸಿ, ವಂದಿಸಿದರು.