ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ

0
14

ಕಾಸರಗೋಡು : ನುಳ್ಳಿ ಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ದಿನಾಂಕ 22-02-2026 ಭಾನುವಾರ ಬೆಳಿಗ್ಗೆ ಸಾಮೂಹಿಕ ಸಂಕೀರ್ತನೆ, 9.30 ಗೆ ಉದ್ಘಾಟನೆಗೊಳ್ಳಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026ರ ! ಸರ್ವಾಧ್ಯಕ್ಷರಾಗಿ, ಕರ್ನಾಟಕ ಸರಕಾರದ ಪ್ರತಿಷ್ಠಿತ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಆಯ್ಕೆಯಾಗಿದ್ದಾರೆ.

ಸಾಹಿತ್ಯ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತ ದುಡಿಯುತ್ತಿರುವ ನಾಡೋಜ’ ಡಾ. ಕೃಷ್ಣ ಪ್ರಸಾದ್ ಕೂಡ್ಲು ಇವರು ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಇವರ ಸವಿನಯ ಅಪೇಕ್ಷೆಯನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ನಾಡೋಜ ಡಾ. ಕೃಷ್ಣ ಪ್ರಸಾದ್ ಕೂಡ್ಲು ಇವರ ನೇತೃತ್ವದಲ್ಲಿ ಸಮ್ಮೇಳನ ಅಚ್ಚುಕಟ್ಟಾಗಿ, ವಿಜೃಂಭಣೆಯಿಂದ ನಡೆಯಲಿದೆ. ಎಂದು ಪರಿಷತ್ತಿನ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here