ಬೆಳ್ತಂಗಡಿ: ಸ್ಟೇ ವಯರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಕಾರಣ, ವಿದ್ಯುತ್ ಆಘಾತವಾಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ತಾಲೂಕಿನ ಶಿಬಾಜೆಯಲ್ಲಿ ನಡೆದಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿಯ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತ ದುರ್ದೈವಿ.
ಮನೆ ಬಳಿ ಬಂದಿದ್ದ ಪಾರ್ಸೆಲ್ ಪಡೆಯಲೆಂದು ಪ್ರತೀಕ್ಷಾ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಪ್ರತೀಕ್ಷಾಗೆ ವಿದ್ಯುತ್ ಆಘಾತವಾಗಿದೆ. ಸ್ಥಳದಲ್ಲಿದ್ದ ತಂದೆ ಅವಳನ್ನು ರಕ್ಷಿಸಲು ಯತ್ನಿಸಿದರಾದರೂ ಅವರಿಗೆ ಸಾಧ್ಯವಾಗಲಿಲ್ಲ. ಅವರಿಗೂ ವಿದ್ಯುತ್ ಆಘಾತವಾಗಿದೆ.
ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಕರೆ ತರಲಾಯಿತಾದರೂ ಅಷ್ಟರಲ್ಲಿ ಪ್ರತೀಕ್ಷಾ ಕೊನೆಯುಸಿರೆಳೆದಿದ್ದಳು ಎನ್ನಲಾಗಿದೆ.