ಅಡಿಕೆ ಕೊಯ್ಯುವಾಗ ವಿದ್ಯುತ್ ಆಘಾತ : 38 ವರ್ಷದ ನಝೀರ್ ಮೃತ್ಯು

0
68

ಬೆಳ್ತಂಗಡಿ : ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ಧರ್ಮಸ್ಥಳ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್ (38) ಎಂದು ಗುರುತಿಸಲಾಗಿದೆ. ಅಡಿಕೆ ಕೊಯ್ಯಲು ಬಳಸುತ್ತಿದ್ದ ದೊಂಟಿ ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ತಾಗಿದ ಪರಿಣಾಮ ನಝೀರ್ ಅವರಿಗೆ ತೀವ್ರ ವಿದ್ಯುತ್ ಆಘಾತ ಸಂಭವಿಸಿತ್ತು.

ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.