ಬೆಂಗಳೂರು : ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಅಧ್ಯಕ್ಷರ ಸಭೆ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಿತು. ಸಭೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು.
ಸಭೆಯಲ್ಲಿ ಶೈಕ್ಷಣಿಕ ಮತ್ತು ಆರ್ಥಿಕ ಯೋಜನೆಗಳು, ಕ್ರೀಯಾ ಯೋಜನೆಗಳು, ಸಾಲ ಸೌಲಭ್ಯಗಳು ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಶ್ರೀ ವಿಶ್ವಕರ್ಮ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ಕುಂಬಾರ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಅಧ್ಯಕ್ಷರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂಬುದರ ಮೇಲೆ ಸಭೆಯಲ್ಲಿ ಒತ್ತು ನೀಡಲಾಗಿದೆ.

