Tuesday, April 22, 2025
HomeUncategorizedಎನ್ ಕೌಂಟರ್ ನಲ್ಲಿ ಏಳು ನಕ್ಸಲರು ಬಲಿ; ಅಪಾರ ಶಸ್ತ್ರಾಸ್ತ್ರ ವಶ

ಎನ್ ಕೌಂಟರ್ ನಲ್ಲಿ ಏಳು ನಕ್ಸಲರು ಬಲಿ; ಅಪಾರ ಶಸ್ತ್ರಾಸ್ತ್ರ ವಶ

ರಾಂಚಿ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಏಳು ಮಂದಿ ನಕ್ಸಲರು ಹತರಾಗಿದ್ದಾರೆ. ಸಾವನ್ನಪ್ಪಿರುವವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ.

ಎನ್ ಕೌಂಟರ್ ನಡೆದ ಸ್ಥಳದಲ್ಲಿ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ನಾರಾಯಣಪುರ ಮತ್ತು ಕಂಕೇರ್ ಗಡಿ ಪ್ರದೇಶದ ಅಬುಜ್ ಮರ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಮೃತದೇಹಗಳನ್ನು ವಶಕ್ಕೆ  ಪಡೆದಿರುವ ಅಧಿಕಾರಿಗಳು ಪತ್ತೆ ಹಚ್ಚುವ ಕಾರ್ಯ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular