ಮಂಗಳೂರು, ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಇರುತ್ರದೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಸಿಕ್ಕಿದರೆ ಗುರುತಿಸಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಭಂದಕ ಅರುಣಾಪ್ರಭಾ ಹೇಳಿದರು.
ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ವತಿಯಿಂದ ಗಾಂಧಿನಗರ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚಿತ್ರಕಲಾ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಮಕ್ಕಳ ಪ್ರತಿಭೆ ಗುರುತಿಸಿ ಹೆತ್ತವರು ಹಾಗೂ ಶಿಕ್ಷಕರು ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಂಗಳ ರಿ ಸೊರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ದಿಲ್ ರಾಜ್ ಆಳ್ವ, ಅನಘ ಸುಝಕೀ ಆಡಳಿತ ನಿರ್ದೇಶಕ ಫಣಿ ಸಾಂಬಾಶಿವ ರಾವ್ ನಡೆಲ್ಲಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಸ್ಪರ್ಧೆ ತೀರ್ಪುಗಾರರಾದ ಗೀತಾ ಬಿ ರೈ,, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.