ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ದಿನಾಂಕ: 09-11-2024 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ. ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣವನ್ನು ಮಾಡಲಿದ್ದಾರೆ. ದಿನಾಂಕ: 09-11-2024 ರಿಂದ 16-11-2024 ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.
ದಿನಾಂಕ: 14-11-2024 ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.
ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ
RELATED ARTICLES