ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ.), ಮಂಗಳೂರು ಹಾಗೂ ಎಂಆರ್ಪಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ವಾದಿರಾಜ್ , ಎಂಆರ್ಪಿಎಲ್ ನೌಕರರ ಸಂಘದ ಅಧ್ಯಕ್ಷ ಯುವರಾಜ್ ಎಂ.ಕೆ. ಮಾತನಾಡಿ, ಯುವಕರು ಉದ್ಯೋಗ ಹುಡುಕುವವರಾಗದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಿ ಎಂದರು .

ಅಧ್ಯಕ್ಷತೆ ವಹಿಸಿದ್ದ ಮೋಹನಂಗಯ್ಯ ಸ್ವಾಮಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಂತ ಉದ್ಯಮ ಸ್ಥಾಪಿಸುವಂತೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಮಾಬೆನ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಹನುಮಂತರಾಯ ಅವರು ಬ್ಯಾಂಕ್ ಸಾಲ, ಸರ್ಕಾರಿ ಯೋಜನೆಗಳು, ಸಬ್ಸಿಡಿ ಹಾಗೂ ಉದ್ಯಮ ಆರಂಭಿಸುವ ವಿಧಾನದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಸಾಧಕರು ಸೇರಿದಂತೆ . ನಂದರಾಜ್ ಸಂಕೇಶ್, ರಾಜೇಶ್ ವೈ., ಶಂಕರ್ ಪೆರಾಜೆ ಮತ್ತಿತರರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

