ಧರ್ಮಸ್ಥಳ ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ

0
33

ಉಡುಪಿ : ತಾಲೂಕಿನ ಉಪ್ಪೂರು ವಲಯದ ಸೆಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅಮ್ಮುಂಜೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಶಿಬಿರ ಹಾಗೂ ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷರಾದ ರಾಜು ಪೂಜಾರಿ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಫ್ರ್ಯಾಂಕಿ ಡಿ ಸೋಜಾ ಮುಖ್ಯ ಅತಿಥಿಗಳು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ ನಾಯ್ಕ ಗ್ರಾಂ ಪಂ ಉಪಾದ್ಯಕ್ಷರಾದ ಸತೀಶ್ ಪೂಜಾರಿ ಕಾರ್ಯಕ್ರಮವನ್ನು ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಯೋಜನಾಧಿಕಾರಿಗಳು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ರಕ್ಷಣೆ ನಮ್ಮ ಹೊಣೆ ಎಂದು ತಿಳಿಸಿ ಗಿಡಗಳನ್ನೂ ನೆಡುವುದರ ಜೊತೆಗೆ ಪಾಲನೆ ಪೋಷಣೆ ಮಾಡುವುದು, ನಮ್ಮೆಲರ ಕರ್ತವ್ಯ ವಾಗಿದೆ ಎಂದು ತಿಳಿಸಿದರು, ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಫ್ರ್ಯಾಂಕಿ ಡಿಸೋಜ ಮಾತನಾಡಿ ಆರಣ್ಯ ನಾಶದಿಂದಾಗಿ ಮಳೆಯಿಲ್ಲದೆ ಬರ ಆವರಿಸಿಕೊಂಡಿದೆ.

ಮನುಷ್ಯ ದುರಾಸೆಯಿಂದ ಕಾಡುಕಡಿದು ನಾಶ ಮಾಡಿ ಮುಂದಿನ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು. ಹಾಗು ಅತ್ಯುತ್ತಮ ಕಾರ್ಯಕ್ರಮ ಅನುಷ್ಠಾನ ಮಾಡಿದ ಯೋಜನೆ ಅವರಿಗೆ ಧನ್ಯವಾದಗಳು ತಿಳಿಸಿದರು , ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ರಾಜು ಪೂಜಾರಿ ಮಾತನಾಡಿ ಯೋಜನೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು ತುಂಬಾ ಸಂತೋಷ. ಮಕ್ಕಳು ಗಿಡಗಳನ್ನು ನೆಡುವುದರ ಜೊತೆಗೆ ನಿರ್ವಹಣೆ ಮಾಡುವುದು,ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಕೂಡ ಸ್ವಚ್ಛ ವಾಗಿ ಇಟ್ಟುಕೊಳ್ಳಬೇಕು ಪರಿಸರ ಉಳಿಸಿ ಬೆಳೆಸಿ ಎಂದು ತಿಳಿಸಿದರು.

ಗ್ರಾಂ ಪಂ ಉಪಾಧ್ಯಾಕ್ಷರಾದ ಸತೀಶ್ ಪೂಜಾರಿ ಮಾತನಾಡಿ, ಪ್ರತಿ ವರ್ಷ ಹುಟ್ಟು ಹಬ್ಬಕ್ಕೆ ಕೇಕ್ ಕಟ್ಟ್ ಮಾಡಿ ಆಚರಣೆ ಮಾಡುವ ಬದಲು ಗಿಡಗಳನ್ನು ನೆಟ್ಟು ಹುಟ್ಟು ಹಬ್ಬ ಆಚರಣೆ ಮಾಡಿ ಪರಿಸರ ಬೆಳಸಿ ಎಂದರು,,ಮಾಹಿತಿ ನೀಡಿದರು ಶಾಲಾ ಮಕ್ಕಳಿಗೆ ಪರಿಸರಕ್ಕೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಿ ಬಹುಮಾನ ವಿತರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಉಷಾ, ಒಕ್ಕೂಟದ ಪದಾಧಿಕಾರಿಗಳಾದ ಆಶಾ, ಸುಜಾತಾ, ಸಬಿತಾ,ಎಲ್ಲಾ ಸಹ ಶಿಕ್ಷಕರು ವಲಯದ ಕೃಷಿ ಮೇಲ್ವಿಚಾರಕರಾದ ರಾಮು ರವರು ಕಾರ್ಯ ಕ್ರಮವನ್ನು ನಿರ್ವಹಿಸಿದರು, ಶಾಲಾ ಶಿಕ್ಷಕಿ ಉಷಾ ಸ್ವಾಗತಿಸಿದರು, ವಲಯ ಮೇಲ್ವಿಚಾರಕಿ ನಾಗರತ್ನ ವಂದಿಸಿದರು, ಸೇವಾ ಪ್ರತಿನಿಧಿ, ಶಶಿಕಲಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here