ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ, ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ತಂಡ ವತಿಯಿಂದ “ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೆಮ್ಮಾನುಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಉದಯಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಸೀಮಾ ಹೆಚ್ ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು.
ಪೆರ್ನೆ ವಲಯ ಮೇಲ್ವಿಚಾರಕರಕಿ ಶಾರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಸಿಗುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಶೌರ್ಯ ತಂಡದ ಸದಸ್ಯರು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಿದರು. ವೇದಿಕೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಶೋಭಾ, ಶೌರ್ಯ ವಿಪತ್ತು ನಿರ್ವಹಣಾ ತಂಡ ಪೆರ್ನೆ ಘಟಕ ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು.

ಯೋಜನೆಯ ಒಕ್ಕೂಟ ಸೇವಾ ಪ್ರತಿನಿಧಿ ಸುಚಿತ್ರ ಆಳ್ವ ಸ್ವಾಗತಿಸಿ, ಶಿಕ್ಷಕಿ ಸಂಧ್ಯಾ ಬಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಖುಷಿ ಮತ್ತು ಮೌಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.