ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

0
5

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ ಸುತ್ತಲಿನ ಪರಿಸರಕ್ಕೆ ಪ್ರಯೋಜನವಾಗಿದೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಗಿಡಗಳನ್ನು ನೆಡುವುದು, ಸ್ವಚ್ಛತೆಯನ್ನು ಕಾಪಾಡುವುದು, ನೀರನ್ನು ಇಂಗಿಸುವ ಕಾರ್ಯಗಳನ್ನು ಕೈಗೊಂಡಾಗ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಬಹುದು ಎಂದರು.

ಶೌರ್ಯ ವಿಪತ್ತು ತಂಡದ ಸದಸ್ಯರಾದ ಸುಲೇಮಾನ್ ಭೀಮಂಡೆ ಮಾತನಾಡಿ ಪರಿಸರ ಸಂರಕ್ಷಣೆ ಎನ್ನುವುದು ಒಂದು ದಿನದ ಕಾರ್ಯಕ್ರಮವಾಗದೆ ಅದು ನಿರಂತರವಾಗಿರಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮಿಂದಲೇ ಆಗಬೇಕು ಪರಿಸರದ ಜೊತೆಗೆ ಹೊಂದಾಣಿಕೆ ಬದುಕು ರೂಡಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷರಾದ ಸಂಜೀವ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಶಿಕ್ಷಕಿ ಕೋಕಿಲ ಬಹುಮಾನ ಪಟ್ಟಿ ವಾಚಿಸಿದರು. ಶಿಕ್ಷಕ ಕಿರಣ್ ಸ್ವಾಗತಿಸಿದರು.ಉಜಿರೆ ವಲಯದ ಮೇಲ್ವಿಚಾರಕರಾದ ಪ್ರೇಮ್ ಪ್ರಸಾದ್ ವಂದಿಸಿದರು. ಶಿಕ್ಷಕ ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.