ಉಡುಪಿಯ ವಿದ್ಯಾರತ್ನ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

0
11

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಇಂದು ಜಾಯಿಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಹಾಗೂ ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ವಿದ್ಯಾರತ್ನ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಿತಾ ರಾವ್ ವಹಿಸಿದ್ದರು. ಕಾಲೇಜಿನ ಕಾರ್ಯದರ್ಶಿಗಳಾದ ಡಾ. ವೆಂಕಟೇಶ್, ಟ್ರಸ್ಟಿ ಡಾ. ಇಂದಿರಾ, ಉಪಪ್ರಾಂಶುಪಾಲರಾದ ಡಾ. ಎಂ.ಕೆ. ರಮೇಶ್ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ಸಿಂಚನಾ ಉಪಸ್ಥಿತರಿದ್ದರು.

ಉಪನ್ಯಾಸಕಿ ಶ್ರೀಲತಾ ಅವರು ಕಾರ್ಯಕ್ರಮವನ್ನು ಪರಿಚಯಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಂಕೇತಿಕವಾಗಿ ಗಿಡಗಳನ್ನು ಕುಂಡಗಳಲ್ಲಿ ನೆಡುವ ಮೂಲಕ ಉದ್ಘಾಟಿಸಲಾಯಿತು. ಪರಿಸರ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯ ಕುರಿತು ಜಾಯಿಂಟ್ಸ್ ಸಂಘದ ಸದಸ್ಯರಾದ ಮಧುಸೂಧನ್ ಹೇರೂರು ಅವರು ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಸುಮಾರು 80 ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪದಾಧಿಕಾರಿಗಳು, ಬೋಧಕ ವೃಂದ ಹಾಗೂ ಸಿಬ್ಬಂದಿ ವರ್ಗ ಸಕ್ರಿಯವಾಗಿ ಭಾಗವಹಿಸಿದರು.

ಜಾಯಿಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರದ ಕಾರ್ಯದರ್ಶಿ ಮಿಲ್ಟನ್ ಒಲಿವೆರಾ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ಸಿಂಚನಾ ನಿರ್ವಹಿಸಿದ್ದು, ರಕ್ಷಿತಾ ಅವರು ವಂದನಾರ್ಪಣೆ ಸಲ್ಲಿಸಿದರು.

LEAVE A REPLY

Please enter your comment!
Please enter your name here