ಪರಿಸರ ಸಂರಕ್ಷಣೆಯ ಕಾಳಜಿ ಮುಖ್ಯ-ಕೆ.ವಿ.ಪ್ರಭಾಕರ್ ಮಂಗಳೂರು, ಮೇ.30;ಜನ ಸಾಮಾನ್ಯರಲ್ಲಿ ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಸುವುದು ಮುಖ್ಯ ಈ ನಿಟ್ಟಿನಲ್ಲಿ ಸಾಮೂಹಿಕ ಗಿಡ ನೆಡುವ ಕಾರ್ಯಕ್ರಮಗಳ ಅಗತ್ಯ ವಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ನಗರದ ಇಂದಿರಾ ಪ್ರೀಯದರ್ಶಿನಿ ವನಿತಾ ಪಾರ್ಕ ನಲ್ಲಿಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಕೆಪಿಟಿ ಮಂಗಳೂ ರು, ಸಂತ ಅಲೋಶಿಯಸ್ ಐಟಿಐ ಹಾಗೂ ಗ್ಲೋಬಲ್ ಗ್ರೀನ್ ಫೌಂಡೇಶನ್ ಸಹಯೋಗ ದೊಂದಿಗೆ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು. ಈ ಸಂದ ರ್ಭದಲ್ಲಿ ರೋಟರಿ ಸೆಂಟ್ರಲ್ ಮಂಗಳೂರು ಘಟಕದ ಅಧ್ಯಕ್ಷ ಬ್ರಿಯಾನ್ ಪಿಂಟೊ,ಮಾಜಿರೋಟರಿ ಸಹಾಯಕ ಗವರ್ನರ್ ರಾಜ ಗೋಪಾಲ್ ರೈ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಸಂತ ಅಲೋಶಿಯಸ್ ಐಟಿಐ ಕಾಲೇಜು,ಕೆಪಿಟಿ ಮಂಗಳೂರಿನ ಶಿಕ್ಷಕರು ಮತ್ತು ವಿದ್ಯಾರ್ಥಿ ಗಳು,ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ನ ಪದಾಧಿಕಾ ರಿಗಳು,ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಪದಾಧಿ ಕಾರಿಗಳು,ಮನಪಾ ಮಾಜಿ ಸದಸ್ಯೆ ಸಂಧ್ಯಾ ಆಚಾರ್ಯ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್,ವಲಯ ಅರಣ್ಯ ಅಧಿಕಾರಿ ರಾಜೇಶ್ ಮೊದಲಾದವರು ಉಪಸ್ಥಿತ ರಿದ್ದರು. ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು.
ಪರಿಸರ ಸಂರಕ್ಷಣೆಯ ಕಾಳಜಿ ಮುಖ್ಯ-ಕೆ.ವಿ.ಪ್ರಭಾಕರ್
RELATED ARTICLES