ಪರಿಸರ ಸಂರಕ್ಷಣಾ ಯೋಜನೆಗೆ ಚಾಲನೆ

0
15

ಮಂಗಳೂರು : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಠ್ಯಾಗೋರ್‍ಪಾರ್ಕ್‍ನಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮಂಗಳೂರು ಮಹಾನಗರ ಪಾಲಿಕೆಯ ಪರಿಸರ ಇಂಜಿನಿಯರ್ ದಯಾನಂದ್ ಪೂಜಾರಿ, ಆರೋಗ್ಯ ಮೇಲ್ವಿಚಾರಕ ವಿನಾಯಕ್ ಎಸ್.ಎಂ., ಪರಿಸರ ಪ್ರೇಮಿ ಮಾಧವ್ ಉಳ್ಳಾಲ್, ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಂಗಳೂರು ಶಾಖೆಯ ಮುಖ್ಯಸ್ಥ ಹಫೀಜ್ ರೆಹಮಾನ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫಾರ್ಹಾನ್ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಸಸಿ ನೆಡುವ ಕಾರ್ಯಕ್ರಮದ ಬಳಿಕ ದೇರಳಕಟ್ಟೆಯ ಕುನಿಲ್ ಶಾಲೆಯ ವಿದ್ಯಾರ್ಥಿಗಳಿಗೆ 250ಕ್ಕೂ ಹೆಚ್ಚು ಗಿಡಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಆವರಣದಲ್ಲಿಯೂ ಸಸಿ ನೆಡುವ ಕಾರ್ಯವನ್ನು ಕೈಗೊಳ್ಳಲಾಯಿತು ಎಂದು ಮಲಬಾರ್ ಗ್ರೂಪ್‍ನ ಅಧ್ಯಕ್ಷ ಎಂ.ಪಿ. ಅಹಮ್ಮದ್ ಹೇಳಿದ್ದಾರೆ.

ಮಲಬಾರ್ ಮಳಿಗೆಗೆ ಭೇಟಿ ನೀಡಿದ ಗ್ರಾಹಕರಿಗೂ ಗಿಡಗಳನ್ನು ವಿತರಿಸಿ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಜೊತೆಗೆ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಪ್ರೋತ್ಸಾ ಹಿಸಲಾಯಿತು. ಸಮಾಜ ಹಾಗೂ ಪರಿಸರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಕಾರ್ಯಕ್ರಮಗಳನ್ನು ಮುಂದುವರಿಸುವ ಮೂಲಕ ಸ್ವಚ್ಛ ಮತ್ತು ಹಸಿರು ಭವಿಷ್ಯ ನಿರ್ಮಾಣಕ್ಕೆ ಸಂಸ್ಥೆ ಬದ್ಧವಾಗಿದೆ ಎಂದು ಅವರು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here