
MRPL ಅಪಘಾತದಲ್ಲಿ ಮೃತಪಟ್ಟ ಭವಿಷ್ಯ ನಿಧಿ ಸದಸ್ಯರ ದುಃಖತಪ್ತ ಕುಟುಂಬಕ್ಕೆ ಸಕಾಲದಲ್ಲಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO
ರಿಫೈನರಿ అండో ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ. ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಸಂದೀಪ್ ಬಿಸ್ವಾಸ್, ಸಹಾಯಕ ಭವಿಷ್ಯ ನಿಧಿ ಆಯುಕ್ತ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
ವರದಿ ರಾಯಿ ರಾಜ ಕುಮಾರ್
